ಬಿಟ್ಟೆನೆಂದರೂ ಬಿಡದೀ ಮಾಯೆ ಎಂಬಂತೆ ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಜೈಲಿನಲ್ಲಿದ್ದ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ನೀಡಿದ್ದರೂ ಸಂಕಷ್ಟ ತಪ್ಪಿಲ್ಲ. ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ನಗರ ಪೊಲೀಸ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.
ಮೇಲ್ಮನವಿ ಸಲ್ಲಿಸಲು ಭರದಿಂದ ಸಿದ್ಧತೆ
ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಪೊಲೀಸ್ ಕಮೀಶನರ್ ಬಿ ದಯಾನಂದ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಹೋಗಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ, ಆದಷ್ಟು ಶೀಘ್ರದಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದರು. ಅನಾರೋಗ್ಯದಿಂದ ಆಸ್ತತ್ರೆ ಸೇರಿರುವ ನಟ ದರ್ಶನ್ ಗೆ ಮತ್ತೊಂದು ಶಾಕ್ ಉಂಟಾಗಿದೆ.
ಇನ್ನೂ ಆಸ್ಪತ್ರೆಯಲ್ಲೇ ಇದ್ದಾರೆ ದರ್ಶನ್
ಬೆನ್ನು ನೋವಿನ ಕಾರಣದಿಂದ ಮಧ್ಯಂತರ ಜಾಮೀನು ಪಡೆದ ಹೊರಬಂದಿದ್ದ ದರ್ಶನ್ ಡಿ.16 ರಂದು ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು ಕೋರ್ಟ್ಗೆ ತೆರಳಿದ್ರು. ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನಟ ದರ್ಶನ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ದರ್ಶನ್ ಸರ್ಜರಿಯ ಬಗ್ಗೆಯಾಗಲೀ ಆಸ್ಪತ್ರೆಯಿಂದ ಡಿಶ್ಚಾರ್ಜ್ ಬಗ್ಗೆಯಾಗಲೀ ಯಾವುದೇ ಮಾಹಿತಿಯಿಲ್ಲ.