- ಕರ್ನಾಟಕ-ತಮಿಳುನಾಡು ಗಡಿಭಾಗದ ಪ್ರೇಮಕಥೆ ಹೇಳುವ “ಏಳುಮಲೆ” ಚಿತ್ರದ ಫಸ್ಟ್ ಸಾಂಗ್ ರಿಲೀಸ್
- ನಿರ್ದೇಶಕ ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ “ಏಳುಮಲೆ” ಚಿತ್ರ
- ಈ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆಕ್ಷನ್ ಕಟ್ ಹೇಳಿದ್ದಾರೆ.
ನಿರ್ದೇಶಕ ತರುಣ್ ಕಿಶೋರ್ ಸುಧೀರ್ Tharun Kishor Sudheer ನಿರ್ಮಾಣ ಮಾಡುತ್ತಿರುವ “ಏಳುಮಲೆ” Elumale ಚಿತ್ರದ ಮೊದಲ ಹಾಡು “ಯಾವಾಗ ಯಾವಾಗ” Yavaga yavaga ರಿಲೀಸ್ ಆಗಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡಿಂಗ್ ನಲ್ಲಿದೆ. ಆನಂದ್ ಆಡಿಯೋ Anand Audio ಯೂಟ್ಯೂಬ್ನಲ್ಲಿ ಈ ಹಾಡು ಬಿಡುಗಡೆಯಾಗಿದೆ. ಕನ್ನಡ ಮಾತ್ರವಲ್ಲ, ತೆಲುಗು, ತಮಿಳು ಭಾಷೆಯಲ್ಲಿಯೂ ಈ ಹಾಡನ್ನು ಬಿಡುಗಡೆ ಮಾಡಲಾಗಿದೆ. ಹಾಡಿಗೆ ನಾಗಾರ್ಜುನ್ ಶರ್ಮಾ Nagarjun Sharma ಸಾಹಿತ್ಯವಿದೆ. ಶ್ರೀರಾಮ್ ಧ್ವನಿಯಾಗಿದ್ದಾರೆ. ಡಿ ಇಮ್ಮನ್ ಸಂಗೀತವಿದೆ. ಈ ಹಾಡಿನ ಮೂಲಕ ಸಿನಿಮಾದ ಬಗ್ಗೆಯೂ ಪ್ರೇಕ್ಷಕರಲ್ಲಿ ಚರ್ಚೆಯಾಗುತ್ತಿದೆ. ಕರ್ನಾಟಕ-ತಮಿಳುನಾಡು ಗಡಿಭಾಗದ ಪ್ರೇಮಕಥೆಯನ್ನು ವಿಭಿನ್ನವಾಗಿ ಕಟ್ಟಿಕೊಟ್ಟು ಭಾಷೆಯ ಮೂಲಕ ಸಹಜವಾದ ಪ್ರೀತಿಯನ್ನು ಸಾರಿ ಹೇಳುವ ಚಿತ್ರ “ಏಳುಮಲೆ”. ಈ ಚಿತ್ರಕ್ಕೆ ಪುನೀತ್ ರಂಗಸ್ವಾಮಿ Puneeth Rangaswami ಆಕ್ಷನ್ ಕಟ್ ಹೇಳಿದ್ದಾರೆ.
ನಟಿ ರಕ್ಷಿತಾ ಅವರ ಸೋದರ ರಾಣಾ Rana, ಈ ಚಿತ್ರದಲ್ಲಿ ಕನ್ನಡದ ಹುಡುಗನ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಅವರಿಗೆ ನಾಯಕಿಯಾಗಿ ವಿವಿಧ ರಿಯಾಲಿಟಿ ಶೋಗಳಲ್ಲಿ ಖ್ಯಾತಿ ಪಡೆದ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ Priya Achar ಸಾಥ್ ನೀಡಿದ್ದು, ತಮಿಳು ಹುಡುಗಿಯ ಪಾತ್ರದಲ್ಲಿ ಮಿಂಚಿದ್ದಾರೆ. ಉಳಿದಂತೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಮೊದಲಾದವರು ವಿವಿಧ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.
ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರೆ. ಅದ್ವಿತ್ ಗುರುಮೂರ್ತಿ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನವಿದೆ. ಈಗಾಗಲೇ ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರತಂಡ ಚಿತ್ರೀಕರಣ ನಡೆಸಿದೆ. ಕನ್ನಡ, ತಮಿಳು, ತೆಲುಗು ಭಾಷೆಯಲ್ಲಿ ಸಿನಿಮಾ ಏಕಕಾಲಕ್ಕೆ ರಿಲೀಸ್ ಆಗಲಿದೆ. ಶೀಘ್ರದಲ್ಲಿಯೇ ಚಿತ್ರದ ಲಾಂಚಿಂಗ್ ಡೇಟ್ ಕೂಡ ಅನೌನ್ಸ್ ಆಗಲಿದೆ.