- ಬಾಕ್ಸಾಫೀಸ್ನಲ್ಲಿ ಧೂಳೆಬ್ಬಿಸಿದ ಯುಐ.!
- ಮೂರು ದಿನಕ್ಕೆ ದಾಖಲೆಯ ಕಲೆಕ್ಷನ್ ಮಾಡಿದ ಉಪ್ಪಿ ಸಿನಿಮಾ
ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಅದ್ಭುತ ಯಶಸ್ಸು ಕಂಡಿದೆ. 9 ವರ್ಷಗಳ ಬಳಿಕ ಉಪೇಂದ್ರ ನಿರ್ದೇಶನದಲ್ಲಿ ಯುಐ ಸಿನಿಮಾ ಮೂಡಿಬಂದಿದ್ದು, ಮೂರು ದಿನಗಳಲ್ಲಿ ಚಿತ್ರ ಒಳ್ಳೆಯ ಗಳಿಕೆ ಮಾಡಿದೆ. ಕನ್ನಡದ ಜೊತೆ ತೆಲುಗು ಮತ್ತು ತಮಿಳಿನಲ್ಲೂ ಚಿತ್ರ ಒಳ್ಳೆಯ ಪ್ರತಿಕ್ರಿಯೆ ಪಡೆದಿದೆ. ವಿಭಿನ್ನ ನಿರ್ದೇಶನ ಮತ್ತು ಕಥಾವಸ್ತು ಇದಕ್ಕೆ ಕಾರಣ.
ಇನ್ನು ಚಿತ್ರ ನೋಡಿದ ಪ್ರೇಕ್ಷಕರು ಈ ಚಿತ್ರವನ್ನು ಒಬ್ಬರು ಒಂದೊಂದು ರೀತಿಯಲ್ಲಿ ವಿಮರ್ಶಿಸುತ್ತಿದ್ದಾರೆ. ದೃಶ್ಯಗಳನ್ನು ಡಿಕೋಡ್ ಮಾಡುವಂತೆ ಉಪೇಂದ್ರ ಅವರು ಕೋರಿದ್ದರು. ಈ ಕೋರಿಕೆಯನ್ನು ಸ್ವೀಕರಿಸಿದ ಅನೇಕರು ಮತ್ತೆ ಮತ್ತೆ ತೆರಳಿ ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ ಮತ್ತು ತಮ್ಮ ವಿಮರ್ಶೆ ತಿಳಿಸುತ್ತಿದದ್ದಾರೆ. ಕೆಲವರು ಈ ಚಿತ್ರಕ್ಕೆ ನೆಗೆಟಿವ್ ವಿಮರ್ಶೆ ಕೊಟ್ಟಿದ್ದೂ ಇದೆ. ಇವುಗಳ ಮಧ್ಯೆ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರಕ್ಕೆ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಗಳಿಕೆ ಆಗಿದೆ. ಉಪೇಂದ್ರ ಸಿನಿಮಾಗಳಲ್ಲಿ ಭಿನ್ನತೆ ಇರುತ್ತದೆ. ಅವರ ನಿರ್ದೇಶನ ಡಿಫರೆಂಟ್ ಆಗಿರುತ್ತದೆ ಎನ್ನುತ್ತಾರೆ ಉಪ್ಪಿ ಅಭಿಮಾನಿಗಳು. ಒಟ್ಟಿನಲ್ಲಿ ಉಪ್ಪಿ ನಿರ್ದೇಶನದ ಯುಐ ಸಿನಿಮಾ ದಾಖಲೆಯ ಕಲೆಕ್ಷನ್ ಮಾಡುವ ಮೂಲಕ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ.