- ತೆರೆಗೆ ಬರಲು ಸಿದ್ಧವಾಯ್ತು ಕಣ್ಣಾ ಮುಚ್ಚೆ ಕಾಡೇ ಗೂಡೇ ಸಿನಿಮಾ.!
- ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡ ರಾಘವೇಂದ್ರ ರಾಜ್‌ಕುಮಾರ್
ರಾಘವೇಂದ್ರ ರಾಜ್ ಕುಮಾರ್ ಅಭಿನಯದ ಕಣ್ಣಾ ಮುಚ್ಚೆ ಕಾಡೇ ಗೂಡೇ ಸಿನಿಮಾವನ್ನು ಡಾರ್ಲಿಂಗ್ ಪ್ರೊಡಕ್ಷನ್ಸ್ ಅಡಿಯಲ್ಲಿ ಅನಿತಾ ವೀರೇಶ್ ಕುಮಾರ್ ನಿರ್ಮಾಣ ಮಾಡಿದ್ದು, ನಟರಾಜ್ ಕೃಷ್ಣಗೌಡ ನಿರ್ದೇಶನ ಮಾಡಿದ್ದಾರೆ. ಇದೀಗ ಈ ಸಿನಿಮಾ ತೆರಿಗೆ ಬರಲು ಸಿದ್ಧವಾಗಿದೆ.
ಮಂಗಳೂರು ಸುಂದರ ತಾಣಗಳಲ್ಲಿ ಚಿತ್ರೀಕರಣ:
ಇನ್ನು ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್ ನಿವೃತ್ತ ವೈದ್ಯರಾಗಿ ಕಾಣಿಸಿಕೊಂಡಿದ್ದಾರೆ. ಅಥರ್ವ ಪ್ರಕಾಶ್ ನಾಯಕನಾಗಿ, ತುಳು ಚಿತ್ರದಲ್ಲಿ ನಟಿಸಿದ್ದ ಪ್ರಾರ್ಥನಾ ನಾಯಕಿಯಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಖಳನಟನಾಗಿ ವೀರೇಶ್ ಕುಮಾರ್ ನಟಿಸಿದ್ದಾರೆ. ಬಹುತೇಕ ಚಿತ್ರೀಕರಣ ಮಂಗಳೂರು ಸುಂದರ ತಾಣಗಳಲ್ಲಿ ನಡೆಸಲಾಗಿದೆ.

ಇನ್ನು ಸಿನಿಮಾದ ಕಥೆ ಒಂದು ಕೊಲೆಯ ಸುತ್ತ ನಡೆಯುತ್ತದೆ. ಚಿತ್ರವನ್ನು ಪ್ರೇಕ್ಷಕರಿಗೆ ಸಸ್ಪೆನ್ಸ್ ಥಿಲ್ಲರ್‌ನೊಂದಿಗೆ ತೋರಿಸಲಾಗುತ್ತಿದೆ.