ರಾವಣಾಪುರ ಚಿತ್ರದ ಟ್ರೇಲರ್ ರಿಲೀಸ್..!

Date:

  • ರಾವಣಾಪುರ ಚಿತ್ರದ ಟ್ರೇಲರ್ ರಿಲೀಸ್..!
  • ಜನವರಿ 17ಕ್ಕೆ ಸಿನಿಮಾ ರಿಲೀಸ್

ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಸಾಹಸಗಳು ನಡೆಯುತ್ತಲೇ ಇವೆ. ಆ ಪ್ರಯತ್ನಗಳು ಸೋತ್ರು ಗೆದ್ರು ಹೊಸಬರು ತಮ್ಮ ಪ್ರಯತ್ನ ನಿಲ್ಲಿಸುವುದಿಲ್ಲ. ಅದರಂತೆ ಈಗ ಹೊಸ ತಂಡ ಸೇರಿಕೊಂಡು ರಾವಣಾಪುರ Ravanapura Movie ಎಂಬ ಸಿನಿಮಾ ಮಾಡಿದ್ದು, ಈ ಚಿತ್ರವೀಗ ತೆರೆಗೆ ಬರಲು ಸಜ್ಜಾಗಿದೆ. ರಾವಣಾಪುರ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಇತ್ತೀಚಿಗೆ ನೆರವೇರಿದೆ. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.

ಟ್ರೇಲ‌ರ್ ಬಿಡುಗಡೆ ಬಳಿಕ ಮಾತನಾಡಿದ ನಿರ್ದೇಶಕ ಕುಮಾ‌ರ್ ಎಂ ಬಾವಗಳ್ಳಿ Kumar M Baggavalli ಸಿನಿಮಾ ಟೆಕ್ನಿಕಲ್ ಆಗಿ ತುಂಬಾ ಸ್ಟ್ರಾಂಗ್ ಆಗಿದೆ. ಹಳೆ ವಿಷಯವನ್ನು ಇವತ್ತಿನ ಪೀಳಿಗೆಗೆ ಹೋಲುವಂತೆ ಚಿತ್ರ ಮಾಡಿದ್ದೇವೆ. ನನ್ನ ಸ್ನೇಹಿತರೊಬ್ಬರ ಜೀವನದಲ್ಲಿ ಒಂದು ಘಟನೆ ನಡೆಯಿತು. ಅದನ್ನು ತೆಗೆದುಕೊಂಡು ಸಿನಿಮಾ ಮಾಡಿದ್ದೇನೆ. ಇದು ನನ್ನ ಮೊದಲ ಪ್ರಯತ್ನ. ಪ್ರತಿಯೊಂದು ಚಿತ್ರವು ಗೆಲ್ಲಬೇಕು ಅಂತಾ ಪ್ರತಿಯೊಬ್ಬ ನಿರ್ದೇಶಕರು ಬರುತ್ತಾರೆ. ತಪ್ಪು ಇದ್ದರೆ ತಿದ್ದಿಕೊಂಡು ಮುಂದೆ ಹೆಜ್ಜೆ ಇಡುತ್ತೇನೆ ಎಂದರು.

ಜನವರಿ 17ಕ್ಕೆ ಸಿನಿಮಾ ರಿಲೀಸ್;

ರಾವಣಾಪುರ ಸಿನಿಮಾದಲ್ಲಿ ರತ್ನನ್ ಕಲ್ಯಾಣ್, ರಕ್ಷಾ, ದಿಲೀಪ್‌ ಕುಮಾ‌ರ್ ಎಂ, ರಘು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದು, ಎಪಿ ಶ್ರೀನಾಥ್, ಸೂರ್ಯ ಆ‌ರ್ ಎನ್, ಮಂಜುನಾಥ್‌ ಎಲ್‌, ವಿಶಾಲ್ ಸಂಜಯ್ ಮತ್ತು ರಾಜೇಶ್ವರಿ ಸೇರಿದಂತೆ ಮತ್ತಿತತರು ನಟಿಸಿದ್ದಾರೆ. ಸಿಂಗನಲ್ಲೂರು ಚೌಡೇಶ್ವರಿ ಕಂಬೈನ್ಸ್ ಬ್ಯಾನರ್ ನಡಿ ಎಲ್ ನಾಗಭೂಷಣ ನಿರ್ಮಾಣ ಮಾಡಿದ್ದು, ಪ್ರಭು ಸಂಗೀತ, ಆನಂದ್ ಇಳಯರಾಜ ಛಾಯಾಗ್ರಹಣ ಚಿತ್ರಕ್ಕಿದೆ. ನೈಜ ಘಟನೆಯಿಂದ ಸ್ಪೂರ್ತಿ ಪಡೆದ ರಾವಣಾಪುರ ಇದೇ ಜನವರಿ 17ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.

Ravanapura Official Trailer

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಸಕ್ಕರೆ ನಾಡಿಂದ ಬರ್ತಿದೆ ಅಕ್ಕರೆ ತುಂಬಿದ ಸಿನಿಮಾ ”ಗಜೇಂದ್ರ ಕೇರಾಫ್ ದೊಡ್ಡರಸಿನಕೆರೆ”

ಸಕ್ಕರೆ ನಾಡಿಂದ ಬರ್ತಿದೆ ಅಕ್ಕರೆ ತುಂಬಿದ ಸಿನಿಮಾ ”ಗಜೇಂದ್ರ ಕೇರಾಫ್ ದೊಡ್ಡರಸಿನಕೆರೆ” ಲವ್...

ಈ ವೀಕೆಂಡ್ ನಲ್ಲಿ ಓಟಿಟಿಯಲ್ಲಿ ಅಬ್ಬರಿಸಲಿದೆ ಈ ಸಿನಿಮಾಗಳು!

ಈ ವೀಕೆಂಡ್ ನಲ್ಲಿ ಓಟಿಟಿಯಲ್ಲಿ ಅಬ್ಬರಿಸಲಿದೆ ಈ ಸಿನಿಮಾಗಳು! ಮಾತಾಡಲು ಬರ್ತಿದೆ ಮಾತೊಂದ...

ಪ್ರೇಕ್ಷಕರೆದುರು ಬೀಸಲು ರೆಡಿಯಾಯ್ತು “ಮಾರುತ”

ಪ್ರೇಕ್ಷಕರೆದುರು ಬೀಸಲು ರೆಡಿಯಾಯ್ತು “ಮಾರುತ” ಅಕ್ಟೋಬರ್ 31 ಕ್ಕೆ ಬಹುನಿರೀಕ್ಷಿತ ಚಿತ್ರ “ಮಾರುತ”...

ಡಾ. ಕರ್ಣ “ಕಿರಣ್ ರಾಜ್” ಅವ್ರ ಕುರಿತು ಇಂಟೆರೆಸ್ಟಿಂಗ್ ವಿಷಯ ಇಲ್ಲಿದೆ ನೋಡಿ

ಡಾ. ಕರ್ಣ “ಕಿರಣ್ ರಾಜ್” ಅವ್ರ ಕುರಿತು ಇಂಟೆರೆಸ್ಟಿಂಗ್ ವಿಷಯ ಇಲ್ಲಿದೆ...