ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ
ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೋಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ಸದ್ಯಕ್ಕೆ ಜಾಮೀನಿನಿಂದ ದರ್ಶನ್ ಗೆ ನಿರಾಳತೆ ದೊರೆತಿದ್ದು, ಅವರ ಮೇಲೆ ಈಗ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಾದ ಒತ್ತಡವೂ ತೊಲಗಿದೆ. ಮಾತ್ರವಲ್ಲದೆ ನಿಂತಿರುವ ಸಿನಿಮಾಗಳ ಚಿತ್ರೀಕರಣಕ್ಕೂ ಅವರು ತೆರಳಬಹುದಾಗಿದೆ. ಹಾಗಾಗಿ ಬಾಕಿ ಇರುವ ಸಿನಿಮಾ ಚಿತ್ರೀಕರಣಗಳಿಗೂ ಇದೀಗ ಹೊಸ ಭಾಗ್ಯ ದೊರೆತಂತಾಗಿದೆ.
ಯಾರ್ಯಾರಿಗೆ ಜಾಮೀನು ದೊರೆತಿದೆ
ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್
ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು
ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ದರ್ಶನ್ ಗೆ ಜಾಮೀನು ಸಿಕ್ಕಿದ ಖುಷಿಯಲ್ಲಿ ಅವರ ಅಭಿಮಾನಿಗಳು ಕೂಡ ಸಖತ್ ಖುಷಿಗೊಂಡಿದ್ದಾರೆ.