‘ಅಲೆಕ್ಸಾ’ ಚಿತ್ರಕ್ಕಾಗಿ ತನಿಖಾಧಿಕಾರಿಯಾದ ಅದಿತಿ ಪ್ರಭುದೇವ

Date:

ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ಪ್ರಮುಖಪಾತ್ರದಲ್ಲಿ ನಟಿಸಿರುವ ‘ಅಲೆಕ್ಸಾ’ (Alexa)ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಜೀವ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ವಿ.ಚಂದ್ರು ನಿರ್ಮಾಣದ ಈ ಚಿತ್ರ ನವೆಂಬರ್ ನಲ್ಲಿ ತೆರೆಗೆ ಬರುತ್ತಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

ಇದೊಂದು ಮರ್ಡರ್ ಮಿಸ್ಟರಿ ಚಿತ್ರ. ಕಥೆ ಕೇಳಿದ ತಕ್ಷಣ ನಿರ್ಮಾಪಕರು ಇಷ್ಟಪಟ್ಟರು. ಇನ್ವೆಸ್ಟಿಕೇಶನ್ ಆಫೀಸರ್ ಆಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಪವನ್ ತೇಜ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಫಾರ್ಮಾಸೆಟಿಕಲ್ ಮಾಫಿಯಾ ಬಗ್ಗೆ ಕೂಡ ಕ್ಲೈಮ್ಯಾಕ್ಸ್ ನಲ್ಲಿ ತೋರಿಸಿದ್ದೇವೆ‌. ಈ ಚಿತ್ರದ ಎರಡನೇ ಭಾಗವನ್ನು ತೆರೆಗೆ ತರುವ ಆಲೋಚನೆ ಇದೆ. ಮೈಸೂರು, ಮಡಿಕೇರಿ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಮೂರು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳು ಚಿತ್ರದಲ್ಲಿದೆ.‌ ಅಕ್ಟೋಬರ್ ಕೊನೆ ಅಥವಾ ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ಬರಲಿದೆ ಎಂದು ನಿರ್ದೇಶಕ ಜೀವ ತಿಳಿಸಿದರು.

ನನಗೆ ನಿಜಜೀವನದಲ್ಲಿ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸ್ಸಿತ್ತು. ಅದು ಆಗಲಿಲ್ಲ.‌ ನಿರ್ದೇಶಕರು ನೀವು ಈ ಚಿತ್ರದಲ್ಲಿ ಇನ್ವೆಸ್ಟಿಕೇಶನ್ ಆಫೀಸರ್ ಅಂದ ತಕ್ಷಣ ಒಪ್ಪಿಕೊಂಡೆ. ಸಾಹಸ ದೃಶ್ಯಗಳಲ್ಲೂ ಕಾಣಿಸಿಕೊಳ್ಳುವ ಕನಸ್ಸಿತ್ತು. ಅದು ಈ ಚಿತ್ರದಲ್ಲಿ ನನಸ್ಸಾಗಿದೆ. ಸಾಹಸ ನಿರ್ದೇಶಕ ರವಿವರ್ಮ ಹಾಗೂ ಮಾಸ್ ಮಾದ ಅವರು ಸಾಹಸ ಸಂಯೋಜನೆಯಲ್ಲಿ ನಾನು ಅಭಿನಯಿಸಿರುವ ಸಾಹಸ ಸನ್ನಿವೇಶಗಳು ಚೆನ್ನಾಗಿ ಬಂದಿದೆ ಎಂದರು ನಟಿ ಅದಿತಿ ಪ್ರಭುದೇವ.

ಚಿತ್ರದಲ್ಲಿ ಗಂಡ – ಹೆಂಡತಿ ಕೊಲೆ ಆಗಿರುತ್ತದೆ. ಆ‌ ಕೊಲೆಯ ತನಿಖೆಯ ಸುತ್ತ ಕಥೆ ಸಾಗುತ್ತದೆ ಎಂದು ಮಾತನಾಡಿದ ನಾಯಕ ಪವನ್ ತೇಜ್ ಅದಿತಿ ಪ್ರಭುದೇವ ಅವರ ಜೊತೆ ನಟಿಸುವ ಹಂಬಲವಿತ್ತು. ಈ ಚಿತ್ರದಲ್ಲಿ ನಟಿಸಿದ್ದೇನೆ ಎಂದರು. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ನೋಡಿ. ಪ್ರೋತ್ಸಾಹ ನೀಡಿ ಎನ್ನುತ್ತಾರೆ ನಿರ್ಮಾಪಕ ವಿ.ಚಂದ್ರು. ಚಿತ್ರದ ಬಹುತೇಕ ಕಲಾವಿದರು, ತಂತ್ರಜ್ಞರು ಹಾಗೂ ಚಿತ್ರದ ವಿತರಕರಾದ ರಿಲಯನ್ಸ್ ಎಂಟರ್ಟೈನ್ಮೆಂಟ್ ಅವರು ‘ಅಲೆಕ್ಸಾ’ ಬಗ್ಗೆ ಮಾತನಾಡಿದರು.

ಪವನ್ ತೇಜ್, ಅದಿತಿ ಪ್ರಭುದೇವ, ನಾಗಾರ್ಜುನ್, ಮೇಘಶ್ರೀ, ಮಿಮಿಕ್ರಿ ಗೋಪಿ, ಚಂದ್ರಕಲಾ ಮೋಹನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.  ಸತೀಶ್ ಬಿ  ಅವರ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ  ಸಂಕಲನ ಅಲೆಕ್ಸಾ ಚಿತ್ರದಲ್ಲಿ ಸುಂದರವಾಗಿ ಮೂಡಿಬಂದಿದೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img

Popular

You Might Also Like
Related

ಏಪ್ರಿಲ್ 18 ಕ್ಕೆ ತೆರೆಯ ಮೇಲೆ ಮೊಳಗಲಿದೆ “ವೀರ ಚಂದ್ರಹಾಸ” ನ ಅಟ್ಟಹಾಸ

ಏಪ್ರಿಲ್ 18 ಕ್ಕೆ ತೆರೆಯ ಮೇಲೆ ಮೊಳಗಲಿದೆ “ವೀರ ಚಂದ್ರಹಾಸ" ನ...

ಸಿನಿಪ್ರಿಯರ ಮುಂದೆ ತೆರೆದುಕೊಳ್ಳಲಿದೆ “ನಿಮ್ದೇ ಕಥೆ”

ಸಿನಿಪ್ರಿಯರ ಮುಂದೆ ತೆರೆದುಕೊಳ್ಳಲಿದೆ “ನಿಮ್ದೇ ಕಥೆ” ಅಭಿಲಾಷ್ ದಳಪತಿ ಮತ್ತು ರಾಷಿಕಾ ಶೆಟ್ಟಿ...

“ಪೆನ್ ಡ್ರೈವ್” ಗೆ ಸಿಕ್ತು ಯು/ಎ ಪ್ರಮಾಣಪತ್ರ

“ಪೆನ್ ಡ್ರೈವ್” ಗೆ ಸಿಕ್ತು ಯು/ಎ ಪ್ರಮಾಣಪತ್ರ ಶೀರ್ಷಿಕೆಯಿಂದಲೇ ಕುತೂಹಲವನ್ನು ಹುಟ್ಟುಹಾಕಿದೆ ಸೆಬಾಸ್ಟಿಯನ್...

ಬಹುತೇಕ ಚಿತ್ರೀಕರಣ ಮುಗಿಸಿದ “ಬ್ರ್ಯಾಟ್” ಚಿತ್ರತಂಡ

ಬಹುತೇಕ ಚಿತ್ರೀಕರಣ ಮುಗಿಸಿದ “ಬ್ರ್ಯಾಟ್” ಚಿತ್ರತಂಡ ಕೌಸಲ್ಯಾ ಸುಪ್ರಜಾ ರಾಮ ಖ್ಯಾತಿಯ ಶಶಾಂಕ್...