ಯಶಸ್ವಿ 25 ದಿನ ಪ್ರೇಕ್ಷಕರಿಗೆ ಮನರಂಜನೆಯ ಊಟ ಬಡಿಸಿದ “ಫುಲ್ ಮೀಲ್ಸ್”

Date:

  • ಯಶಸ್ವಿ 25 ದಿನ ಪ್ರೇಕ್ಷಕರಿಗೆ ಮನರಂಜನೆಯ ಊಟ ಬಡಿಸಿದ “ಫುಲ್ ಮೀಲ್ಸ್”
  • 25 ದಿನ ಪೂರೈಸಿದ ಸಂಭ್ರಮದಲ್ಲಿದೆ “ಫುಲ್ ಮೀಲ್ಸ್” ಚಿತ್ರತಂಡ
  • ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸಿರುವ , ಎನ್ ವಿನಾಯಕ ನಿರ್ದೇಶಿಸಿರುವ ಚಿತ್ರ

ನವೆಂಬರ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು “ಫುಲ್ ಮೀಲ್ಸ್”. ವೆಡ್ಡಿಂಗ್ ಫೋಟೋಗ್ರಾಫರ್ ನೊಬ್ಬ ಪ್ರೀತಿಯ ಬಲೆಗೆ ಬೀಳುವ ತ್ರಿಕೋನ ಪ್ರೇಮ ಕಥಾಹಂದರವನ್ನು ಹೊಂದಿರುವ ಈ ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು, ನಾಲ್ಕನೆಯ ವಾರಕ್ಕೆ ಕಾಲಿಟ್ಟಿದೆ. ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸಿರುವ, ಎನ್ ವಿನಾಯಕ ಆಕ್ಷನ್ ಕಟ್ ಹೇಳಿರುವ ಚಿತ್ರಕ್ಕೆ ಪ್ರೇಕ್ಷಕರಿಂದ ಫುಲ್ ಮಾರ್ಕ್ ಸಿಕ್ಕಿದ್ದು, ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಅಭಿನಯ ಗಮನ ಸೆಳೆಯುವಂತಿದೆ.

ಸಂಭ್ರಮದಲ್ಲಿದೆ ಚಿತ್ರತಂಡ

ಬದಲಾದ ಕಾಲಘಟ್ಟದಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25 ದಿನಗಳನ್ನು ಪೂರೈಸುವುದೇ ಕನಸಿನ ಮಾತು. ಇಂತಹಾ ಸಂದರ್ಭದಲ್ಲಿ “ಫುಲ್ ಮೀಲ್ಸ್” ಚಿತ್ರತಂಡ ಯಶಸ್ವಿಯಾಗಿ 25 ದಿನಗಳ ಸಂಭ್ರಮಾಚರಣೆಯಲ್ಲಿದೆ. “ಸಂಕಷ್ಟಕರ ಗಣಪತಿ”, “ಅಬ್ಬಬ್ಬ”, “ಫ್ಯಾಮಿಲಿ ಪ್ಯಾಕ್” ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದ ಲಿಖಿತ್ ಶೆಟ್ಟಿ ಈ ಚಿತ್ರದಲ್ಲೂ ತಮ್ಮ ನಟನೆ, ಆ್ಯಕ್ಷನ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದು ಚಿತ್ರರಂಗದ ಭರವಸೆಯ ನಟನಾಗಿ ಗಮನ ಸೆಳೆದಿದ್ದಾರೆ. ನಿರ್ದೇಶಕ ಎನ್. ವಿನಾಯಕ ಅವರಿಗಿದು ಚೊಚ್ಚಲ ನಿರ್ದೇಶನದ ಚಿತ್ರ. ಅವರ ಕೆಲಸಕ್ಕೆ ಚಿತ್ರರಂಗದಲ್ಲಿ ಉತ್ತಮ ಪ್ರಶಂಸೆ ಸಿಕ್ಕಿದೆ ಮಾಥ್ರವಲ್ಲದೇ, ಪ್ರೇಕ್ಷಕರು ಕೂಡ ಮೆಚ್ಚುಗೆ ಸೂಚಿಸಿದ್ದಾರೆ.

ಹಾಸ್ಯಭರಿತ ತ್ರಿಕೋನ ಪ್ರೇಮಕಥೆ

ಅಲ್ಲೊಂದು ಮದುವೆ ಫಿಕ್ಸ್ ಆಗಿದೆ, ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಯುತ್ತಿದೆ. ಈ ನಡುವೆ ಮದುಮಗಳಿಗೆ ಫೋಟೋಗ್ರಾಫರ್ ಮೇಲೆಯೇ ಆಕರ್ಷಣೆ ಮೂಡುತ್ತದೆ. ಮುಂದೆ ಏನಾಗುತ್ತದೆ? ಎಂಬ ಕುತೂಹಲಕಾರಿ ಒನ್-ಲೈನ್ನೊಂದಿಗೆ ಪ್ರೇಕ್ಷಕರ ಮುಂದೆ ಬಂದಿರುವ ಈ ಚಿತ್ರವು, ಹಾಸ್ಯಭರಿತ ತ್ರಿಕೋನ ಪ್ರೇಮಕಥೆಯಾಗಿದೆ. ಎಲ್ಲ ವಯೋಮಾನದವರಿಗೆ ಸೂಕ್ತವಾದ ಈ ಫ್ಯಾಮಿಲಿ ಎಂಟರ್ಟೈನರ್, ಮಧ್ಯಮ ವರ್ಗದ ವೆಡ್ಡಿಂಗ್ ಫೋಟೋಗ್ರಾಫರ್ನ ಜೀವನ ಪಯಣ, ಕನಸುಗಳು ಮತ್ತು ಕುಟುಂಬದ ಮೌಲ್ಯಗಳನ್ನು ಸಹಜವಾಗಿ ತೆರೆದಿಡುವ ಎಂಗೇಜಿಂಗ್ ರೊಮ್ಯಾಂಟಿಕ್ ಕಾಮಿಡಿ ಚಿತ್ರವಾಗಿದೆ.

ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೊನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಚೇತನ್ ದುರ್ಗ, ನಾಗೇಂದ್ರ ಅರಸ್, ಮೂಗು ಸುರೇಶ್, ಗಣೇಶ್ ರಾವ್, ಕೋಟೆ ಪ್ರಭಾಕರ್ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ, ಮನೋಹರ್ ಜೋಷಿ ಛಾಯಾಗ್ರಹಣ, ಹರೀಶ್ ಗೌಡ ಸಂಭಾಷಣೆ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ನಿರ್ದೇಶನ, ಕವಿರಾಜ್ ಮತ್ತು ಪ್ರಮೋದ್ ಮರವಂತೆ ಸಾಹಿತ್ಯ ಚಿತ್ರಕ್ಕಿದೆ.

kannada-movie-full-meals-completes-successful-25-days Poster

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಇಂಪಾದ ಗುಂಗನ್ನು ಮನದಲ್ಲಿ ಉಳಿಸುತ್ತದೆ “ಮರಳಿದೆ ಜೀವ” ಮೆಲೋಡಿ ಸಾಂಗ್

ಇಂಪಾದ ಗುಂಗನ್ನು ಮನದಲ್ಲಿ ಉಳಿಸುತ್ತದೆ “ಮರಳಿದೆ ಜೀವ” ಮೆಲೋಡಿ ಸಾಂಗ್ ಹೊರಬಂತು ಸದ್ಯದಲ್ಲೇ...

ಅನೌನ್ಸ್ ಆಯ್ತು “ಸಿಕ್ಸ್ ಮಂಥ್ಸ್ ನೋಟಿಸ್”; ಹೊರಬರಲಿದೆ ಹೃದಯಸ್ಪರ್ಶಿ ಪ್ರಣಯ, ಹಾಸ್ಯ ಚಿತ್ರ

ಅನೌನ್ಸ್ ಆಯ್ತು "ಸಿಕ್ಸ್ ಮಂಥ್ಸ್ ನೋಟಿಸ್"; ಹೊರಬರಲಿದೆ ಹೃದಯಸ್ಪರ್ಶಿ ಪ್ರಣಯ, ಹಾಸ್ಯ...

ಬಿಗ್ ಬಾಸ್ ಮನೆಯಲ್ಲಿ ಭೇಷ್ ಎನ್ನಿಸಿಕೊಳ್ಳುತ್ತಿರುವ “ಗಿಲ್ಲಿ ನಟ” ನ ಇಂಟೆರೆಸ್ಟಿಂಗ್ ಸ್ಟೋರಿ

ಬಿಗ್ ಬಾಸ್ ಮನೆಯಲ್ಲಿ ಭೇಷ್ ಎನ್ನಿಸಿಕೊಳ್ಳುತ್ತಿರುವ "ಗಿಲ್ಲಿ ನಟ" ನ ಇಂಟೆರೆಸ್ಟಿಂಗ್...

ಸಾಹಸಸಿಂಹ ವಿಷ್ಣುವರ್ಧನ್ ಅವ್ರ ಫೇಮಸ್ ಮೂವೀ ಡೈಲಾಗ್ಸ್ – Dr Vishnuvardhan Dialogues Quotes

ಸಾಹಸಸಿಂಹ ವಿಷ್ಣುವರ್ಧನ್ ಅವ್ರ ಫೇಮಸ್ ಮೂವೀ ಡೈಲಾಗ್ಸ್ - Dr Vishnuvardhan...