- ಮೇ 30 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ “ಮಾದೇವ”
- ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ ಚಿತ್ರದ “ಮಾ ಮಾ ಮಾದೇವ” ಹಾಡು
- ಆರ್ ಕೇಶವ ನಿರ್ಮಿಸಿರುವ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ ನವೀನ್ ರೆಡ್ಡಿ
ಇತ್ತೀಚೆಗಷ್ಟೇ ರಿಲೀಸ್ ಆಗಿ ಸಕ್ಕತ್ ವ್ಯೂಸ್ ಪಡೀತಿದೆ “ಮಾದೇವ” Madeva ಚಿತ್ರದ “ಮಾ ಮಾ ಮಾದೇವ” Ma Ma Madeva ಹಾಡು. ರಾಧಾಕೃಷ್ಣ ಪಿಕ್ಚರ್ಸ್ Radhakrishna Pictures ಬ್ಯಾನರ್ ಅಡಿಯಲ್ಲಿ ಆರ್ ಕೇಶವ R Keshava (ದೇವಸಂದ್ರ) ನಿರ್ಮಿಸಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ ನವೀನ್ ರೆಡ್ಡಿ Naveen Reddy. ಆ್ಯಕ್ಷನ್ ಪ್ರಧಾನ ಪಾತ್ರಗಳಿಂದ ಮನೆಮಾತಾಗಿರುವ ವಿನೋದ್ ಪ್ರಭಾಕರ್ Vinod Prabhakar ಈ ಚಿತ್ರದಲ್ಲಿ ನಾಯಕನಾಗಿದ್ದು, ರಗಡ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈವರೆಗೆ ಮಾಡಿರದ ವಿಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ. ಇವರಿಗೆ ಜೋಡಿಯಾಗಿ ಮಿಂಚಿದ್ದಾರೆ ಸೋನಲ್ ಮೊಂತೆರೋ Sonal Monteiro.
ವಿಶೇಷ ಪಾತ್ರದಲ್ಲಿ ಶ್ರೀನಗರ ಕಿಟ್ಟಿ
ಈ ಚಿತ್ರಕ್ಕೆ ಪ್ರದ್ಯೋತನ್ ಅವರ ಸಂಗೀತ ಸಂಯೋಜನೆ, ಬಾಲಕೃಷ್ಣ ತೋಟ ಅವರ ಛಾಯಾಗ್ರಹಣ, ವಿಜಯ್ ಎಂ ಕುಮಾರ್ ಅವರ ಸಂಕಲನ, ಗುಣ ಅವರ ಕಲಾ ನಿರ್ದೇಶನ, ಜೊತೆಗೆ ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ರಿಯಲ್ ಸತೀಶ್ ಮತ್ತು ವಿಕ್ರಮ್ ಮೋರ್ ಅವರ ಸಾಹಸ ಸಂಯೋಜನೆ ಇದೆ. ಶ್ರೀನಗರ ಕಿಟ್ಟಿ Srinagara Kitty ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟರಾದ ಮಾಲಾಶ್ರೀ, ಶ್ರುತಿ, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ, ಮೈಕೋ ನಾಗರಾಜ್, ಬಾಲ ರಾಜವಾಡಿ, ಮುನಿರಾಜು ಮತ್ತು ಚೈತ್ರ ಮುಂತಾದವರು ತಾರಾಗಣದಲ್ಲಿರುವ ಈ ಸಿನಿಮಾ ಮೇ 30ಕ್ಕೆ ತೆರೆಯ ಮೇಲೆ ಬರಲಿದೆ.