ಡಾರ್ಲಿಂಗ್ ಕೃಷ್ಣ ಅಭಿನಯದ ಫಾದರ್ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ

Date:

ಆರ್ ಚಂದ್ರು ಅವರ ಆರ್.ಸಿ. ಸ್ಟುಡಿಯೋಸ್ ಎಂಬ ಬೃಹತ್ ನಿರ್ಮಾಣ ಸಂಸ್ಥೆ ಚಿತ್ರೀಕರಣ ಪ್ರಾರಂಭಿಸಿದ ಐದು ಚಿತ್ರಗಳಲ್ಲಿ ಮೊದಲ ಚಿತ್ರ ಫಾದರ್, ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು ಇದೀಗ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಪ್ರಕಾಶ್ ರೈ ಹಾಗೂ ಡಾರ್ಲಿಂಗ್ ಕೃಷ್ಣ ತಂದೆ ಮಗನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ ರಾಜ್ ಮೋಹನ್ ರವರು ಆಕ್ಷನ್ ಕಟ್ ಹೇಳಿದ್ದಾರೆ‌.

ಪೋಸ್ಟರ್ ಬಿಡುಗಡೆಗೊಳಿಸಿದ ಕಿಚ್ಚ ಸುದೀಪ್

ರಾಜಕೀಯ ಮುಖಂಡರಾದ ಹೆಚ್ ಎಂ ರೇವಣ್ಣ, ನಟ ಅನೂಪ್ ರೇವಣ್ಣ, ಆನಂದ್ ಆಡಿಯೋ ಶ್ಯಾಮ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿದ ಸುದೀಪ್ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಸದಾ ಜೊತೆಗಿರುತ್ತೇನೆ ಎಂದಿದ್ದಾರೆ.

ಫಾದರ್ ಚಿತ್ರದ ಕಥಾಹಂದರ ಹೀಗಿದೆ

ಅಪ್ಪ ಮಗನ ಬಾಂಧವ್ಯದ ಕುರಿತಾಗಿ ಹೆಣೆದ ಕತೆಯೇ ಈ ಚಿತ್ರದ ಕಥಾಹಂದರ. ಎಲ್ಲಾ ಭಾಷೆಗೂ ಸಲ್ಲುವ ಕಥಾಹಂದರ ಹೊಂದಿರುವ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶಸ್ಸನ್ನು ಕಾಣುವ ಭರವಸೆ ಹೊಂದಿದೆ. ಅನೇಕಲ್, ಧರ್ಮಸ್ಥಳ, ಮಂಗಳೂರು, ಚನ್ನಪಟ್ಟಣ, ಬೆಂಗಳೂರು ಮುಂತಾದ ಕಡೆಗಳಲ್ಲಿ ಶೂಟಿಂಗ್ ನಡೆದಿದೆ.

ಸಾಮಾನ್ಯವಾಗಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಜೋಡಿಯೇ ಯಾವಾಗಲೂ ಚಿತ್ರ ಮಾಡುತ್ತದ್ದರೆ ಈ ಬಾರಿ ನಾಯಕ ಡಾರ್ಲಿಂಗ್ ಕೃಷ್ಣ ಅವರಿಗೆ ನಟಿ ಅಮೃತಾ ಅಯ್ಯಂಗಾರ್ ಜೋಡಿಯಾಗಿದ್ದಾರೆ. ನಟ ನಾಗಭೂಷಣ್ ಮುಂತಾದವರು ತಾರಾಗಣದಲ್ಲಿದ್ದಾರೆ. ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ಆನಂದ್ ಪಂಡಿತ್ ಪ್ರಸ್ತುತಪಡಿಸಿರುತ್ತಾರೆ. ವಿನೋದ್ ಮಾಸ್ಟರ್ ಸಾಹಸ ನಿರ್ದೇಶನವಿದ್ದು, ಚಿತ್ರದ ಸಂಭಾಷಣೆಯನ್ನು ಮಂಜು ಮಾಂಡವ್ಯ ಬರೆದಿರುತ್ತಾರೆ. ಸುಜ್ಞಾನಮೂರ್ತಿ ಅವರ ಛಾಯಾಗ್ರಹಣ ಮತ್ತು ನಕುಲ್ ಅಭ್ಯಂಕರ್ ಅವರ ಸಂಗೀತ ಚಿತ್ರಕ್ಕಿದೆ.

Father movie motion poster video :

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಕನ್ನಡದ ಎರಡು ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿಯ ಗರಿ: ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತು ಗ್ರಾಮ ಜೀವನದ ಕತೆ ಹೇಳುವ ಎರಡು ಚಿತ್ರಗಳು

ಕನ್ನಡದ ಎರಡು ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿಯ ಗರಿ: ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತು...

ಕರ್ನಾಟಕ-ತಮಿಳುನಾಡು ಗಡಿಭಾಗದ ಪ್ರೇಮಕಥೆ ಹೇಳುವ “ಏಳುಮಲೆ” ಚಿತ್ರದ ಫಸ್ಟ್ ಸಾಂಗ್ ರಿಲೀಸ್

ಕರ್ನಾಟಕ-ತಮಿಳುನಾಡು ಗಡಿಭಾಗದ ಪ್ರೇಮಕಥೆ ಹೇಳುವ “ಏಳುಮಲೆ” ಚಿತ್ರದ ಫಸ್ಟ್ ಸಾಂಗ್ ರಿಲೀಸ್ ನಿರ್ದೇಶಕ...

“ಜಸ್ಟ್ ಮ್ಯಾರೀಡ್” ರಿಲೀಸ್ ಡೇಟ್ ಫಿಕ್ಸ್

“ಜಸ್ಟ್ ಮ್ಯಾರೀಡ್” ರಿಲೀಸ್ ಡೇಟ್ ಫಿಕ್ಸ್ ಆಗಸ್ಟ್ 22 ಕ್ಕೆ ಹೊರಬರಲಿದೆ ಸಿ.ಆರ್...

ಕುಟುಂಬದ ಕಹಾನಿ ಹೇಳಲು ಕಿರುತೆರೆಗೆ ಬಂತು “ನಾವು ನಮ್ಮವರು”

ಕುಟುಂಬದ ಕಹಾನಿ ಹೇಳಲು ಕಿರುತೆರೆಗೆ ಬಂತು “ನಾವು ನಮ್ಮವರು” ಹೊಸ ರಿಯಾಲಿಟಿ ಶೋ...