- ಬಿಡುಗಡೆ ಆಯ್ತು ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ ಟೀಸರ್
- ಮೊದಲ ಬಾರಿಗೆ ಕಥೆ, ಚಿತ್ರಕಥೆ, ಆಕ್ಷನ್ ಕಟ್ ಹೇಳಿ ನಾಯಕನಾಗಿ ನಟಿಸಿದ್ದಾರೆ ಹೊನ್ನರಾಜ್
- ಸೇವಾ ಮನೋಭಾವದ ಹಳ್ಳಿಯ ಯುವಕನ ಸುತ್ತ ಸುತ್ತತ್ತೆ ಚಿತ್ರದ ಕಥೆ
ಶ್ರೀ ಸತ್ಯಲಕ್ಷ್ಮಿ ಕ್ರಿಯೇಶನ್ಸ್ Shri Sathyalakshmi Creations ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ “ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ” ಗೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ ಹೊನ್ನರಾಜ್ Honnaraj. ಯಶ್ ನಟನೆಯ ರಾಮಾಚಾರಿ ಚಿತ್ರಕ್ಕೆ ಸಹನಿರ್ದೇಶನ ಮಾಡಿದ್ದ ಹೊನ್ನರಾಜ್ ಈ ಚಿತ್ರದ ನಾಯಕನಾಗಿಯೂ ಮಿಂಚಲಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಟೀಸರನ್ನು ಸಚಿವರಾದ ಹೆಚ್.ಕೆ.ಪಾಟೀಲ್ ಅವರು ಬಿಡುಗಡೆ ಮಾಡಿದರು.
ನೈಜ ಘಟನೆಯಾಧಾರಿತ ಹಳ್ಳಿ ಹುಡುಗನ ಕಥೆ
ನೈಜ ಘಟನೆಯನ್ನು ಆಧರಿಸಿದ ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾ ಇದಾಗಿದ್ದು ಸೆನ್ಸಾರ್ ನಿಂದ ಯು/ಎ ಸಿಕ್ಕಿದೆ. ಚಿತ್ರದಲ್ಲಿ ನಾಯಕ ಯಶ್ ಅಭಿಮಾನಿ, ಸ್ನೇಹಕ್ಕೆ ಹೆಚ್ಚು ಬೆಲೆ ಕೊಡುವವನು, ಸದಾ ಸಮಾಜ ಸೇವೆಯಲ್ಲಿ ತೊಡಗಿರುವ ನಾಯಕ ಮದುವೆ ಆಗ್ತಾನೋ ಇಲ್ಲವೋ, ಎನ್ನುವುದೇ ಚಿತ್ರದ ಕಥೆ. ಮದ್ದೂರು, ಹುಳಿಯಾರು, ಚಿಕ್ಕನಾಯಕನಾಹಳ್ಳಿ, ಶ್ರೀರಂಗಪಟ್ಟಣದ ಸುತ್ತಮುತ್ತ ಈ ಚಿತ್ರವನ್ನು ಚಿತ್ರೀಕರಿಸಲಾಗಿದೆ.
ಶೃತಿ ಬಬಿತಾ Shruthi Babitha ನಾಯಕಿಯಾಗಿ ಕಾಣಿಸಿಕೊಂಡಿದ್ದು, ಚಿತ್ರದ 4 ಹಾಡುಗಳಿಗೆ ವಿನು ಮನಸು ಸಂಗೀತ ನೀಡಿದ್ದು, ಶಿವಪುತ್ರ ಛಾಯಾಗ್ರಹಣ, ಗಿರೀಶ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಮೈಸೂರು ಮಂಜುಳ , ರೇಖಾದಾಸ್ ಮತ್ತಿತರರು ಚಿತ್ರದಲ್ಲಿ ನಟಿಸಿದ್ದಾರೆ.