- “ಪೆನ್ ಡ್ರೈವ್” ಗೆ ಸಿಕ್ತು ಯು/ಎ ಪ್ರಮಾಣಪತ್ರ
- ಶೀರ್ಷಿಕೆಯಿಂದಲೇ ಕುತೂಹಲವನ್ನು ಹುಟ್ಟುಹಾಕಿದೆ ಸೆಬಾಸ್ಟಿಯನ್ ಡೇವಿಡ್ ನಿರ್ದೇಶನದ ಚಿತ್ರ
- ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ
ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶಿಸಲಾದ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಅನೇಕ ಚಿತ್ರಗಳನ್ನು ನಿರ್ದೇಶಿಸಿರುವ ಸೆಬಾಸ್ಟಿಯನ್ Sebastian, “ಪೆನ್ ಡ್ರೈವ್” Pen Drive ಗೆ ಕಥೆ ಮತ್ತು ಚಿತ್ರಕಥೆಯನ್ನು ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಬಿಗ್ ಬಾಸ್ ಖ್ಯಾತಿಯ ತನಿಶಾ ಕುಪ್ಪಂಡ Thanisha Kuppanda ಮತ್ತು ಕಿಶನ್ Kishan ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದಲ್ಲಿ ಮಾಲಾಶ್ರೀ Malashree ಖಡಕ್ ಪಾತ್ರ ನಿರ್ವಹಿಸಿದ್ದಾರೆ. ಶೀರ್ಷಿಕೆಯಿಂದಲೇ ಕುತೂಹಲಕ್ಕೆ ಕಾರಣವಾಗಿರುವ “ಪೆನ್ ಡ್ರೈವ್” ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ.
ಚಿತ್ರದಲ್ಲಿ ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನಾ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮತ್ತು ಎನ್ ಹನುಮಂತರಾಜು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಪಿವಿಆರ್ ಸ್ವಾಮಿ ಅವರ ಛಾಯಾಗ್ರಹಣ ಮತ್ತು ನಾಗೇಶ್ ಅವರ ಸಂಕಲನವಿದೆ. ಚಿತ್ರಕ್ಕೆ ಡಾ. ವಿ ನಾಗೇಂದ್ರ ಪ್ರಸಾದ್ Dr. V. Nagendra Prasad ಸಂಗೀತ ಸಂಯೋಜಿಸಿದ್ದು, ಸದ್ಯದಲ್ಲೇ ಚಿತ್ರದ ಹಾಡುಗಳು ಬಿಡುಗಡೆಯಾಗಲಿವೆ ಎಂದು ಚಿತ್ರತಂಡ ತಿಳಿಸಿದೆ.