ಮಹಾಗುರು ಹಂಸಲೇಖರಿಂದ ಬಂಗಾರದ ಪದಕ ಪಡೆದ ತೀರ್ಥಹಳ್ಳಿ ಗಾಯಕಿ ಶ್ರದ್ಧಾ!

Date:

ಮಹಾಗುರು ಹಂಸಲೇಖರಿಂದ ಬಂಗಾರದ ಪದಕ ಪಡೆದ ತೀರ್ಥಹಳ್ಳಿ ಗಾಯಕಿ ಶ್ರದ್ಧಾ!
ರಾಜ್ಯ ಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ತೀರ್ಥಹಳ್ಳಿಯ ಹೆಮ್ಮೆಯ ಗಾಯಕಿ ಕಟ್ಟೆಹಕ್ಕಲು ಸುಧಾಕರ್ ಹಾಗೂ ಶಮಂತ ದಂಪತಿಯ ಪುತ್ರಿ ಶ್ರದ್ಧಾ ರವರು ನಾದಬ್ರಹ್ಮ ಡಾ. ಹಂಸಲೇಖ ರವರ ಸ್ಟುಡಿಯೋದಲ್ಲಿ ನಡೆದ ರಾಜ್ಯಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಮಹಾಗುರು ಹಂಸಲೇಖರವರಿಂದ ಬಂಗಾರದ ಪದಕವನ್ನು ಪಡೆದುಕೊಂಡಿದ್ದಾರೆ.

ಶ್ರದ್ಧಾ ರವರು ಪ್ರಸ್ತುತ ತೀರ್ಥಹಳ್ಳಿಯ ಸಹ್ಯಾದ್ರಿ ಸಂಸ್ಥೆಯಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದು, ಭಾರತದ ಶ್ರೇಷ್ಠ ಗಾಯಕರಲ್ಲಿ ಒಬ್ಬರಾದ ಡಾ. ಎಸ್ ಪಿ ಬಾಲಸುಬ್ರಮಣ್ಯಂ ರವರ ಜೊತೆ ವೇದಿಕೆಯಲ್ಲಿ ಹಾಡಿದ್ದಾರೆ. ಹಾಗೂ ಇವರು ತನ್ನ ಅತಿ ಚಿಕ್ಕ ವಯಸ್ಸಿನಲ್ಲಿ ಚಂದನ ಟಿವಿ ಸೇರಿದಂತೆ ಕನ್ನಡದ ಹಲವು ವಾಹಿನಿಯಲ್ಲಿ ಕಾರ್ಯಕ್ರಮ ನೀಡಿದ್ದು, ತನ್ನ ಹತ್ತನೇ ವಯಸ್ಸಿನಲ್ಲಿ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಉದಯ ಸಿಂಗರ್ಸ್ ಜೂನಿಯರ್ಸ್ ಎಂಬ ಕಾರ್ಯಕ್ರಮದಲ್ಲಿ ಫಿನಾಲೆಯವರೆಗೂ ತಲುಪಿ ಮೆಚ್ಚುಗೆ ಪಡೆದುಕೊಂಡಿದ್ದಾರೆ.

ತೀರ್ಥಹಳ್ಳಿಯ ಗಾಯಕಿ ಶ್ರದ್ಧಾ ರವರ ಸಾಧನೆಗೆ ಸ್ಥಳೀಯರು ಶುಭ ಹಾರೈಸಿದ್ದು, ಇವರು ಇನ್ನೂ ಹೆಚ್ಚಿನ ಸಂಗೀತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಾಲೂಕಿಗೆ ಹೆಮ್ಮೆತರಲಿ ಎಂಬುದು ನಮ್ಮೆಲ್ಲರ ಹಾರೈಕೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಗಣಪತಿ ಪೆಂಡಾಲ್‌ ನಲ್ಲಿ ಹಾಕಲು ಕನ್ನಡ ಸಿನಿಮಾ ಹಾಡುಗಳನ್ನು ಹುಡುಕ್ತಿದ್ದೀರಾ? ಇಲ್ಲಿದೆ ಲಿಸ್ಟ್

ಗಣಪತಿ ಪೆಂಡಾಲ್‌ ನಲ್ಲಿ ಹಾಕಲು ಕನ್ನಡ ಸಿನಿಮಾ ಹಾಡುಗಳನ್ನು ಹುಡುಕ್ತಿದ್ದೀರಾ? ಇಲ್ಲಿದೆ...

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ ಕನ್ನಡ ಚಿತ್ರಗಳು – These new Kannada movies are available on OTT

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ...

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ – The Remarkable Journey of “Toxic”

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ ಸಾಮಾನ್ಯ...

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – How to submit your short film to a film festival

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ...