ತಂದೆ ಮಗನ ಬಾಂಧವ್ಯ ಸಾರುವ ಚಿತ್ರ S/o ಮುತ್ತಣ್ಣ ಮಾರ್ಚ್ ನಲ್ಲಿ ತೆರೆಗೆ

Date:

  • ತಂದೆ ಮಗನ ಬಾಂಧವ್ಯ ಸಾರುವ ಚಿತ್ರ S/o ಮುತ್ತಣ್ಣ ಮಾರ್ಚ್ ನಲ್ಲಿ ತೆರೆಗೆ
  • ಡೈನಮಿಕ್ ಹೀರೋ ದೇವರಾಜ್ ದ್ವಿತೀಯ ಪುತ್ರ ಪ್ರಣಮ್ ನಟನೆಯ ಚಿತ್ರ
  • ಈಗಾಗಲೇ ಎಲ್ಲರ ಗಮನ ಸೆಳೆದಿದೆ S/o ಮುತ್ತಣ್ಣ ಚಿತ್ರದ ಟೀಸರ್

ಪುರಾತನ ಫಿಲಂಸ್ ಹಾಗೂ ಎಸ್ ಅರ್ ಕೆ ಫಿಲಂಸ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರದ ರಚನೆ ಹಾಗೂ ನಿರ್ದೇಶನ ಶ್ರೀಕಾಂತ್ ಹುಣಸೂರು Srikanth Hunasuru ಅವರದ್ದು. ಇದು ಅವರಿಗೆ ಚೊಚ್ಚಲ ನಿರ್ದೇಶನದ ಚಿತ್ರವಾಗಿದ್ದು, ಎಲ್ಲರ ನಿರೀಕ್ಷೆಯೂ ಹೆಚ್ಚಿದೆ.

ಟೀಸರ್ ಅನಾವರಣಗೊಳಿಸಿದ್ದ ಶಿವರಾಜಕುಮಾರ್

ಇತ್ತೀಚೆಗೆ ಈ ಚಿತ್ರದ ಟೀಸರ್ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ Shivaraj Kumar ಅವರಿಂದ ಅನಾವರಣಗೊಂಡಿದ್ದು ಎಲ್ಲರ ಗಮನ ಸೆಳೆದಿದೆ. ತಂದೆ ಮತ್ತು ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಬೆಂಗಳೂರು ಹಾಗೂ ಕಾಶಿಯಲ್ಲಿ ಚಿತ್ರೀಕರಣ ನಡೆದಿದೆ.

ಪ್ರಣಮ್ ದೇವರಾಜ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ದಿಯಾ ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ರಂಗಾಯಣ ರಘು ನಾಯಕನ ತಂದೆಯಾಗಿ ಮಿಂಚಿದ್ದಾರೆ. ಉಳಿದಂತೆ ತಾರಾಗಣದಲ್ಲಿ ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ ಮುಂತಾದವರು ಇದ್ದಾರೆ. ಸಚಿನ್ ಬಸ್ರೂರು ಸಂಗೀತ ಸಂಯೋಜಿಸಿರುವ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಚಿತ್ರಕ್ಕಿದೆ. ಬಹುನಿರೀಕ್ಷಿತ ಚಿತ್ರ ಮಾರ್ಚ್ ಕೊನೆಯ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಈ ವಾರ ಓಟಿಟಿಯಲ್ಲಿ ಮನರಂಜನೆಯ ಅಮಲೇರಿಸಲು ಬರ್ತಿದೆ ಎರಡು ಸೂಪರ್ ಕನ್ನಡ ಚಿತ್ರಗಳು

ಈ ವಾರ ಓಟಿಟಿಯಲ್ಲಿ ಮನರಂಜನೆಯ ಅಮಲೇರಿಸಲು ಬರ್ತಿದೆ ಎರಡು ಸೂಪರ್ ಕನ್ನಡ...

ಹೊಸ ವರ್ಷಕ್ಕೆ ಹೊಸ ಪ್ರತಿಭೆಗಳ ಚಿತ್ರ “ಪ್ರೇಮ್ ಲವ್ ನಂದಿನಿ”

ಹೊಸ ವರ್ಷಕ್ಕೆ ಹೊಸ ಪ್ರತಿಭೆಗಳ ಚಿತ್ರ “ಪ್ರೇಮ್ ಲವ್ ನಂದಿನಿ” ಬಸವರಾಜ ನಂದಿ...

ಸಂಕ್ರಾಂತಿ ಹಬ್ಬದ ಸಡಗರಕ್ಕೆ ಈ ಸಿನಿಮಾ ಹಾಡುಗಳನ್ನು ಟ್ಯೂನ್ ಮಾಡ್ಕೊಳ್ಳಿ

ಸಂಕ್ರಾಂತಿ ಹಬ್ಬದ ಸಡಗರಕ್ಕೆ ಈ ಸಿನಿಮಾ ಹಾಡುಗಳನ್ನು ಟ್ಯೂನ್ ಮಾಡ್ಕೊಳ್ಳಿ ಹಿಗ್ಗಿ ನಲಿದಾಡಿಸುವ...