- ಶೀಘ್ರದಲ್ಲೇ ಬರಲಿದೆ ಚಿತ್ರದುರ್ಗದ ಹೊಸ ಪ್ರತಿಭೆಗಳ ಸಸ್ಪೆನ್ಸ್-ಕ್ರೈಂ ಥ್ರಿಲ್ಲರ್ “ಮಾಯಾವಿ”
- ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿದೆ ಚಿತ್ರತಂಡ
- ಚಿತ್ರದುರ್ಗ ಮೂಲದ ರಘುರಾಮ್ ಚಿತ್ರದ ಮೂಲಕ ನಾಯಕ ನಟನಾಗಿ ಚಿತ್ರರಂಗಕ್ಕೆ ಪರಿಚಯ
ಚಿತ್ರದುರ್ಗದ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಮಾಯಾವಿ” Mayavi ಚಿತ್ರ ತೆರೆಗೆ ಬರಲು ರೆಡಿಯಾಗಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ “ಮಾಯಾವಿ” ಚಿತ್ರದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆಗೊಳಿಸಿದೆ. ಡಾ. ಮಹಂತೇಶ್ ಹೆಚ್. Dr. Mahanthesh H ನಿರ್ಮಿಸುತ್ತಿರುವ “ಮಾಯಾವಿ” ಚಿತ್ರಕ್ಕೆ ಶಂಕರ್ ಜಿ. Shankar G ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಯುವ ಪ್ರತಿಭೆ ರಘುರಾಮ್ Raghuram ಚಿತ್ರದಲ್ಲಿ ನಾಯಕ ನಟನಾಗಿ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಇವರಿಗೆ ನಿಶ್ಚಿತಾ ಶೆಟ್ಟಿ Nishchitha Shetty ನಾಯಕಿಯಾಗಿ ಸಾಥ್ ನೀಡುತ್ತಿದ್ದಾರೆ. ಇನ್ನು ತಾರಾಗಣದಲ್ಲಿ ಹಿರಿಯ ನಟ ಎಂ. ಕೆ. ಮಠ, ಸೂರ್ಯ ಪ್ರವೀಣ್, ಸುರೇಶ ಬಾಬು, ಅನುರಾಧಾ, ಶಿಲ್ಪಾ, ಖುಷಿ ಗೌಡ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಎಲ್ಲಾ ಥರದ ಆಡಿಯನ್ಸ್ ಗೂ ಇಷ್ಟವಾಗುವಂಥ ಸಿನಿಮಾ
“ಶ್ರೀದುರ್ಗಾ ಸೆಕ್ಯುರಿಟಿ ಸರ್ವೀಸಸ್” Shree Durga Security Services ಬ್ಯಾನರಿನಲ್ಲಿ ಚಿತ್ರ ತೆರೆ ಕಾಣಲಿದೆ. ಇದೊಂದು ವಾಸ್ತವತೆಗೆ ಹತ್ತಿರವಾಗಿರುವಂಥ ಸಿನಿಮಾ. ಸಸ್ಪೆನ್ಸ್-ಕ್ರೈಂ ಥ್ರಿಲ್ಲರ್ ಕಥಾಹಂದರದ ಸಿನಿಮಾ. ಸಿನಿಮಾದ ಕೊನೆಯಲ್ಲೊಂದು ಸಂದೇಶವಿದೆ. ಎಲ್ಲಾ ಥರದ ಆಡಿಯನ್ಸ್ ಗೂ ಇಷ್ಟವಾಗುವಂಥ ಸಿನಿಮಾ ಇದಾಗಿದ್ದು, ಲವ್, ಸೆಂಟಿಮೆಂಟ್, ಆ್ಯಕ್ಷನ್ ಹೀಗೆ ಎಲ್ಲಾ ಥರದ ಎಲಿಮೆಂಟ್ಸ್ ಈ ಸಿನಿಮಾದಲ್ಲಿದೆ ಎನ್ನುತ್ತೆ ಚಿತ್ರತಂಡ.
ಚಿತ್ರದ ಚಿತ್ರೀಕರಣವನ್ನು ಚಿತ್ರದುರ್ಗ, ಬೆಂಗಳೂರು, ಹೊಸಪೇಟೆ ಸುತ್ತಮುತ್ತ ನಡೆಸಲಾಗಿದೆ. ಚಿತ್ರದ ಎರಡು ಹಾಡುಗಳಿಗೆ ಅಗಸ್ತ್ಯ ಸಂತೋಷ್ ಸಂಗೀತ ಸಂಯೋಜಿಸಿದ್ದು ವಿಜಯ ಪ್ರಕಾಶ್ Vijaya Prakash, ಮೇಘನಾ ಮತ್ತಿತರರು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಚಿತ್ರಕ್ಕೆ ಗುರುದತ್ತ ಮುಸುರಿ ಛಾಯಾಗ್ರಹಣ, ಅನಿಲ್ ಕುಮಾರ್ ಸಂಕಲನ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಟ್ರೇಲರ್ ಮತ್ತು ಹಾಡುಗಳ ಮೂಲಕ ಸಿನಿರಸಿಕರನ್ನು ಸೆಳೆಯುತ್ತಿರುವ “ಮಾಯಾವಿ” ಚಿತ್ರ, ಶೀಘ್ರದಲ್ಲಿ ಬಿಡುಗಡೆಯಾಗಲಿದ್ದು ಕನ್ನಡದ ಸಿನಿಪ್ರಿಯರನ್ನು ರಂಜಿಸಲಿದೆ.