- ಕೊನೇ ಕ್ಷಣದಲ್ಲಿ ಕ್ಯಾನ್ಸಲ್ ಆಯ್ತು ‘ಸಂಜು ವೆಡ್ಸ್ ಗೀತಾ 2’ ಬಿಡುಗಡೆ!
- ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹಾಕಿದ ಚಿತ್ರತಂಡ
ಶ್ರೀನಗರ ಕಿಟ್ಟಿ, ರಚಿತಾ ರಾಮ್ ಮುಂತಾದವರು ನಟಿಸಿರುವ ‘ಸಂಜು ವೆಡ್ಸ್ ಗೀತಾ 2’ Sanju Weds Geetha 2 ಸಿನಿಮಾದ ಬಿಡುಗಡೆ ಕ್ಯಾನ್ಸಲ್ ಆಗಿದೆ. ಜನವರಿ 10ರಂದು ಬಿಡುಗಡೆ ಮಾಡಲು ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಅಂತಿಮ ಹಂತದಲ್ಲಿ ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿದೆ.
ಈ ಸಿನಿಮಾಗೆ ನಾಗಶೇಖರ್ ಅವರು ನಿರ್ದೇಶನ ಮಾಡಿದ್ದು, ಚಿತ್ರತಂಡದಲ್ಲಿನ ಜಟಾಪಟಿಯಿಂದಾಗಿ ಸಿನಿಮಾದ ರಿಲೀಸ್ ಮುಂದಕ್ಕೆ ಹೋಗುವಂತಾಗಿದೆ. ಹಾಗಾಗಿ, ಇಂದು ಸಂಜು ವೆಡ್ಸ್ ಗೀತಾ 2′ ಸಿನಿಮಾ ಬಿಡುಗಡೆ ಆಗುತ್ತಿಲ್ಲ.

ಟೈಟಲ್ ಕಾರಣದಿಂದಲೇ ‘ಸಂಜು ವೆಡ್ಸ್ ಗೀತಾ 2’ ಚಿತ್ರ ನಿರೀಕ್ಷೆ ಮೂಡಿಸಿತ್ತು. ಹಾಗಾಗಿ ಈ ಸಿನಿಮಾವನ್ನು ನೋಡಬೇಕು ಎಂದು ರಚಿತಾ ರಾಮ್, ಶ್ರೀನಗರ ಕಿಟ್ಟಿ ಫ್ಯಾನ್ಸ್ ಕಾಯುತ್ತಿದ್ದರು. ಇನ್ನೇನು ಜನವರಿ 10 ಬಂದೇ ಬಿಡ್ತು, ಚಿತ್ರಮಂದಿರದಲ್ಲಿ ಸಿನಿಮಾ ನೋಡೋಣ ಎಂದುಕೊಂಡಿದ್ದ ಎಲ್ಲ ಅಭಿಮಾನಿಗಳಿಗೆ ನಿರಾಸೆ ಆಗಿದೆ. ‘ಕ್ಷಮಿಸಿ, ಸಿನಿಮಾದ ರಿಲೀಸ್ ದಿನಾಂಕ ಮುಂದೂಡಲಾಗಿದೆ’ ಎಂದು ಚಿತ್ರತಂಡದವರು ಮಾಹಿತಿ ನೀಡಿದ್ದಾರೆ. ಸಂಜು ವೆಡ್ಸ್ ಗೀತಾ 2 ಸಿನಿಮಾದ ಬಿಡುಗಡೆಗೆ ಹೈದಾರಾಬಾದ್ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಕಾರಣದಿಂದ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕುವುದು ಅನಿವಾರ್ಯ ಆಗಿದೆ.