ಚೇಸರ್ ಚಿತ್ರದ ಚಿತ್ರೀಕರಣ ಮುಕ್ತಾಯ

Date:

  • ಚೇಸರ್ ಚಿತ್ರದ ಚಿತ್ರೀಕರಣ ಮುಕ್ತಾಯ
  • ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಎಂ ಜಯರಾಮ್ ನಿರ್ದೇಶನದ ಚಿತ್ರ “ಚೇಸರ್”
  • ನಾಯಕ ನಟರಾಗಿ ಸುಮಂತ್ ಶೈಲೇಂದ್ರ, ರಕ್ಷಾ ಮೆನನ್ ಮಿಂಚಿದ್ದಾರೆ

ಉಪೇಂದ್ರ Upendra ಅಭಿನಯಿಸಿರುವ ಬುದ್ಧಿವಂತ 2 ಚಿತ್ರದ ಖ್ಯಾತ ನಿರ್ದೇಶಕ ಎಂ.ಜಯರಾಮ್ ಅವರ ಕೈಚಳಕದಲ್ಲಿ ಮೂಡಿಬರುತ್ತಿರುವ ಚಿತ್ರ “ಚೇಸರ್” ನ Chaser ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯದಲ್ಲೇ ಟೀಸರ್ ಬಿಡುಗಡೆಗೊಳ್ಳಲಿದೆ. ಮಾಲತಿ ಶೇಖರ್ ಶಿವಮೊಗ್ಗ ಇವರು ಈ ಚಿತ್ರದ ನಿರ್ಮಾಣ ಮಾಡುತ್ತಿದ್ದಾರೆ.

ಲವ್, ಸಸ್ಪೆನ್ಸ್, ಆಕ್ಷನ್ ಚಿತ್ರ

ಸ್ಯಾಂಡಲ್ ವುಡ್ ಹಾಗೂ ಟಾಲಿವುಡ್ ಎರಡರಲ್ಲೂ ಖ್ಯಾತರಾಗಿರುವ ದಿಲ್ವಾಲ ಚಿತ್ರದ ಮೂಲಕ ನಾಯಕ ನಟನಾಗಿ ಗುರುತಿಸಿಕೊಂಡಿರುವ ಸುಮಂತ್ ಶೈಲೇಂದ್ರ ನಾಯಕ ನಟನಾಗಿ, ಹಾಗೂ ರಕ್ಷಾ ಮೆನನ್ ಅವರಿಗೆ ಜೋಡಿಯಾಗಿ ಅಭಿನಯಿಸಿರುವ ಈ ಚಿತ್ರ ಲವ್, ಸಸ್ಪೆನ್ಸ್ ಜಾನರ್ ಕಥಾಹಂದರವನ್ನು ಹೊಂದಿದ್ದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದೆ. ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ, ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಕೆ.ಎಂ.ಪ್ರಶಾಂತ್ ಸಂಕಲನ ಮಾಡಿದ್ದು, ಮುಖ್ಯಭೂಮಿಕೆಯಲ್ಲಿ ರವಿಶಂಕರ್, ಸಾಧು ಕೋಕಿಲ, ರಂಗಾಯಣ ರಘು, ಕುರಿ ಪ್ರತಾಪ್, ಚಿಕ್ಕಣ್ಣ, ಸುಚೇಂದ್ರ ಪ್ರಸಾದ್, ಕಡ್ಡಿಪುಡಿ ಚಂದ್ರು, ಮುಂತಾದವರು ನಟಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಈ ವಾರ ಓಟಿಟಿಯಲ್ಲಿ ಮನರಂಜನೆಯ ಅಮಲೇರಿಸಲು ಬರ್ತಿದೆ ಎರಡು ಸೂಪರ್ ಕನ್ನಡ ಚಿತ್ರಗಳು

ಈ ವಾರ ಓಟಿಟಿಯಲ್ಲಿ ಮನರಂಜನೆಯ ಅಮಲೇರಿಸಲು ಬರ್ತಿದೆ ಎರಡು ಸೂಪರ್ ಕನ್ನಡ...

ಹೊಸ ವರ್ಷಕ್ಕೆ ಹೊಸ ಪ್ರತಿಭೆಗಳ ಚಿತ್ರ “ಪ್ರೇಮ್ ಲವ್ ನಂದಿನಿ”

ಹೊಸ ವರ್ಷಕ್ಕೆ ಹೊಸ ಪ್ರತಿಭೆಗಳ ಚಿತ್ರ “ಪ್ರೇಮ್ ಲವ್ ನಂದಿನಿ” ಬಸವರಾಜ ನಂದಿ...

ಸಂಕ್ರಾಂತಿ ಹಬ್ಬದ ಸಡಗರಕ್ಕೆ ಈ ಸಿನಿಮಾ ಹಾಡುಗಳನ್ನು ಟ್ಯೂನ್ ಮಾಡ್ಕೊಳ್ಳಿ

ಸಂಕ್ರಾಂತಿ ಹಬ್ಬದ ಸಡಗರಕ್ಕೆ ಈ ಸಿನಿಮಾ ಹಾಡುಗಳನ್ನು ಟ್ಯೂನ್ ಮಾಡ್ಕೊಳ್ಳಿ ಹಿಗ್ಗಿ ನಲಿದಾಡಿಸುವ...