- ಚಿತ್ರೀಕರಣ ಪೂರ್ಣಗೊಳಿಸಿದ “ಐ ಆ್ಯಮ್ ಗಾಡ್ “ ಚಿತ್ರತಂಡ
- ನಾಯಕ, ನಿರ್ದೇಶಕ, ನಿರ್ಮಾಪಕನಾಗಿ ರವಿ ಗೌಡ
- ರೊಮ್ಯಾಂಟಿಕ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ “ಐ ಆಮ್ ಗಾಡ್”
ಇತ್ತೀಚೆಗಷ್ಟೇ “ಐ ಆ್ಯಮ್ ಗಾಡ್ “ I Am God Movie ಚಿತ್ರದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬಿಡುಗಡೆಗೊಂಡಿದ್ದು, ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಾಕಿ ಇದ್ದು, ಚಿತ್ರದ ಬಿಡುಗಡೆಯ ದಿನಾಂಕ ಇನ್ನಷ್ಟೇ ಹೊರಬೀಳಬೇಕಿದೆ. ಬೆಂಗಳೂರು ಹಾಗೂ ಕೇರಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ರೊಮ್ಯಾಂಟಿಕ್, ಥ್ರಿಲ್ಲರ್ ಮೂವೀ
ಧ್ವಜ ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆಗೆ ಕಾಲಿಟ್ಟಿದ್ದ ರವಿ ಗೌಡ Ravi Gowda ಅವರು ಈ ಚಿತ್ರದ ಮೂಲಕ ನಿರ್ದೇಶಕನ ಸ್ಥಾನಕ್ಕೇರಿದ್ದಾರೆ. ಚಿತ್ರದಲ್ಲಿ ನಾಯಕ, ನಿರ್ದೇಶಕ, ನಿರ್ಮಾಪಕ ಈ ಮೂರೂ ಪಾತ್ರಗಳನ್ನು ಬ್ಯಾಲನ್ಸ್ ಮಾಡಿರುತ್ತಾರೆ. ರೊಮ್ಯಾಂಟಿಕ್ ಥ್ರಿಲ್ಲರ್ ಮೂವೀ ಆಗಿರುವ “ಐ ಆಮ್ ಗಾಡ್ “ ಚಿತ್ರದ ಶೀರ್ಷಿಕೆಯೇ ಕುತೂಹಲ ಹುಟ್ಟಿಸುತ್ತಿದೆ. ಚಿತ್ರದಲ್ಲಿ ನಾಯಕಿಯಾಗಿ ವಿಜೇತ ಪರೀಕ್ ಮಿಂಚಿದ್ದಾರೆ.
ಸಿಬಿಜ್ ಪ್ರೊಡಕ್ಷನ್ ಅಡಿಯಲ್ಲಿ ಚಿತ್ರ ಮೂಡಿಬರುತ್ತಿದ್ದು, ಕಾಂತಾರ ಖ್ಯಾತಿಯ ಅಜನೀಶ್ ಲೋಕನಾಥ್ ಸಂಗೀತವಿದೆ. ರವಿವರ್ಮಾ ಸಾಹಸ ನಿರ್ದೇಶನ, ಜಿತಿನ್ ದಾಸ್ ಛಾಯಾಗ್ರಹಣ, ಸುರೇಶ್ ಆರುಮುಗಂ ಸಂಕಲನವಿದೆ.