ಪ್ರೇಕ್ಷಕರ ಮನರಂಜಿಸಲು ರೆಡಿಯಾಗಿದೆ “ಟೈಮ್ ಪಾಸ್”

Date:

  • ಪ್ರೇಕ್ಷಕರ ಮನರಂಜಿಸಲು ರೆಡಿಯಾಗಿದೆ “ಟೈಮ್ ಪಾಸ್”
  • ಟೀಸರ್ ನಲ್ಲೇ ಸಖತ್ ಸೌಂಡ್ ಮಾಡಿದ `ಟೈಮ್ ಪಾಸ್’
  • ಅಕ್ಟೋಬರ್ 17 ರಂದು ತೆರೆಗೆ ಈ ಡಾರ್ಕ್ ಹ್ಯೂಮರ್ ಚಿತ್ರ

ಸಮಾಜಕ್ಕೆ ಕನ್ನಡಿ ಹಿಡಿಯುವ ಕಥೆಯೊಂದನ್ನು ತೆರೆಯ ಮೇಲೆ ತರಲು ಹೊರಟಿರುವ “ಟೈಮ್ ಪಾಸ್” Time Pass ಚಿತ್ರದ ಟೀಸರ್ ಬಿಡುಗಡೆಗೊಂಡಿದ್ದು, ಚಿತ್ರ ಅಕ್ಟೋಬರ್ 17 ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲು ರೆಡಿಯಾಗಿದೆ. ಚೇತನ್ ಜೋಡಿದಾರ್ Chetan Jodidar ಆಕ್ಷನ್ ಕಟ್ ಹೇಳಿರುವ ಈ ಚಿತ್ರವನ್ನು ಶ್ರೀ ಚೇತನ ಸರ್ವಿಸಸ್ ಬ್ಯಾನರ್ Sri Chetana servies banner ಮೂಲಕ ಗುಂಡೂರು ಶೇಖರ್, ಕಿರಣ್ ಕುಮಾರ್ ಶೆಟ್ಟಿ ಎಂ.ಹೆಚ್ ಕೃಷ್ಣಮೂರ್ತಿ ನಿರ್ಮಾಣ ಮಾಡಿದ್ದಾರೆ. ಇಮ್ರಾನ್ ಪಾಷಾ, ವೈಸಿರಿ ಕೆ ಗೌಡ, ರತ್ಷಾರಾಮ್, ಕೆ. ಚೇತನ್ ಜೋಡಿದಾರ್, ಓಂ ಶ್ರೀ ಯಕ್ಷಶಿಫ್, ಪ್ರಭಾಕರ್ ರಾವ್, ನವೀನ್ ಕುಮಾರ್, ಸಂಪತ್ ಕುಮಾರ್, ಅಶ್ವಿನಿ ಶ್ರೀನಿವಾಸ್ ಚಿತ್ರದಲ್ಲಿ ಮುಖ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಈಗಾಗಲೇ “ಟೈಮ್ ಪಾಸ್” ಫಸ್ಟ್ ಲುಕ್ ಪೋಸ್ಟರ್ ಮೂಲಕ ಒಂದಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈಗ ಚಿತ್ರದ ಟೀಸರ್ ಕೂಡ ಸದ್ದು ಮಾಡತೊಡಗಿದೆ. ಮನರಂಜನೆಯನ್ನೇ ಮುಖ್ಯ ಬಿಂದುವಾಗಿಸಿಕೊಂಡು ಈ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ ಎನ್ನುತ್ತದೆ ಚಿತ್ರತಂಡ. ಪ್ರತಿಷ್ಠಿತ ಆಡಿಯೋ ಸಂಸ್ಥೆಯಾದ ಸರೆಗಮ ಕನ್ನಡ ಸಂಸ್ಥೆ ಟೈಮ್ ಪಾಸ್ ಚಿತ್ರದ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿದೆ. ಅದರ ಯೂಟ್ಯೂಬ್ ಚಾನೆಲ್ಲಿನಲ್ಲಿ ಹಾಡುಗಳು ಬಿಡುಗಡೆಗೊಂಡಿವೆ.

ಡಾರ್ಕ್ ಹ್ಯೂಮರ್ ಜಾನರಿಗೆ ಸೇರಿಕೊಳ್ಳುವ ಈ ಚಿತ್ರಕ್ಕೆ ಗಿರೀಶ್ ಗೌಡ ಸಾಹಸ ನಿರ್ದೇಶನ, ವೈಷ್ಣವಿ ಸತ್ಯನಾರಾಯಣ್ ನೃತ್ಯ ನಿರ್ದೇಶನ, ರಾಜೀವ್ ಗಣೇಶ್ ಛಾಯಾಗ್ರಹಣ, ಮಣಿ ಪ್ರಚಾರ ಕಲೆ, ಡಿ. ಶಾಮಸುಂದರ್, ಬಿ.ಕೆ ದಯಾನಂದ ನಿರ್ಮಾಣ ನಿರ್ವಹಣೆ, ಹರಿ ಪರಮ್ ಸಂಕಲನ, ಡಿ.ಎಂ ಉದಯ ಕುಮಾರ್ (ಡಿಕೆ) ಸಂಗೀತ ನಿರ್ದೇಶನವಿದೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಸಕ್ಕರೆ ನಾಡಿಂದ ಬರ್ತಿದೆ ಅಕ್ಕರೆ ತುಂಬಿದ ಸಿನಿಮಾ ”ಗಜೇಂದ್ರ ಕೇರಾಫ್ ದೊಡ್ಡರಸಿನಕೆರೆ”

ಸಕ್ಕರೆ ನಾಡಿಂದ ಬರ್ತಿದೆ ಅಕ್ಕರೆ ತುಂಬಿದ ಸಿನಿಮಾ ”ಗಜೇಂದ್ರ ಕೇರಾಫ್ ದೊಡ್ಡರಸಿನಕೆರೆ” ಲವ್...

ಈ ವೀಕೆಂಡ್ ನಲ್ಲಿ ಓಟಿಟಿಯಲ್ಲಿ ಅಬ್ಬರಿಸಲಿದೆ ಈ ಸಿನಿಮಾಗಳು!

ಈ ವೀಕೆಂಡ್ ನಲ್ಲಿ ಓಟಿಟಿಯಲ್ಲಿ ಅಬ್ಬರಿಸಲಿದೆ ಈ ಸಿನಿಮಾಗಳು! ಮಾತಾಡಲು ಬರ್ತಿದೆ ಮಾತೊಂದ...

ಪ್ರೇಕ್ಷಕರೆದುರು ಬೀಸಲು ರೆಡಿಯಾಯ್ತು “ಮಾರುತ”

ಪ್ರೇಕ್ಷಕರೆದುರು ಬೀಸಲು ರೆಡಿಯಾಯ್ತು “ಮಾರುತ” ಅಕ್ಟೋಬರ್ 31 ಕ್ಕೆ ಬಹುನಿರೀಕ್ಷಿತ ಚಿತ್ರ “ಮಾರುತ”...

ಡಾ. ಕರ್ಣ “ಕಿರಣ್ ರಾಜ್” ಅವ್ರ ಕುರಿತು ಇಂಟೆರೆಸ್ಟಿಂಗ್ ವಿಷಯ ಇಲ್ಲಿದೆ ನೋಡಿ

ಡಾ. ಕರ್ಣ “ಕಿರಣ್ ರಾಜ್” ಅವ್ರ ಕುರಿತು ಇಂಟೆರೆಸ್ಟಿಂಗ್ ವಿಷಯ ಇಲ್ಲಿದೆ...